Mysore
19
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಎಎಪಿಯು ಕಡಿಮೆ ಸಮಯದಲ್ಲೇ ರಾಷ್ಟ್ರೀಯ ಪಕ್ಷ ಎನಿಸಿರುವುದು ‘ಪವಾಡ’: ಕೇಜ್ರಿವಾಲ್

ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.
ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್‌, ಇದರ ಶ್ರೇಯ ಜನರಿಗೇ ಸಲ್ಲಬೇಕು. ಅವರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ತಮ್ಮ ಪಕ್ಷಕ್ಕೆ ನೀಡುವಂತೆ ದೇವರಲ್ಲಿ ಮನವಿ ಮಾಡಿದ್ದಾರೆ.

ಚುನಾವಣಾ ಆಯೋಗದ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಟ್ವೀಟ್‌ ಮಾಡಿರುವ ಕೇಜ್ರಿವಾಲ್, ‘ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ಕೋಟ್ಯಂತರ ಜನರು ನಮ್ಮನ್ನು ಈ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಜನರು ನಮ್ಮಿಂದ ಸಾಕಷ್ಟು ನಿರೀಕ್ಷಿಸುತ್ತಾರೆ. ಇಂದು ನಮಗೆ ತುಂಬಾ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೇವರೇ, ಈ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯನ್ನು ನೀಡು’ ಎಂದು ಬರೆದುಕೊಂಡಿದ್ದಾರೆ.2012ರಲ್ಲಿ ಸ್ಥಾಪನೆಯಾದ ಎಎಪಿಯು, 10 ವರ್ಷಗಳ್ಲಲೇ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಿಟ್ಟಿಸಿದೆ.ಸದ್ಯ ದೆಹಲಿ ಮತ್ತು ಪಂಜಾಬ್‌ನಲ್ಲಿ ಈ ಪಕ್ಷದ ಸರ್ಕಾರಗಳು ಅಸ್ತಿತ್ವದಲ್ಲಿದ್ದು, ಗುಜರಾತ್‌ನಲ್ಲಿ ಐವರು ಮತ್ತು ಗೋವಾದಲ್ಲಿ ಇಬ್ಬರು ಶಾಸಕರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ