ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.
ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್, ಇದರ ಶ್ರೇಯ ಜನರಿಗೇ ಸಲ್ಲಬೇಕು. ಅವರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ತಮ್ಮ ಪಕ್ಷಕ್ಕೆ ನೀಡುವಂತೆ ದೇವರಲ್ಲಿ ಮನವಿ ಮಾಡಿದ್ದಾರೆ.
ಚುನಾವಣಾ ಆಯೋಗದ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ಕೋಟ್ಯಂತರ ಜನರು ನಮ್ಮನ್ನು ಈ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಜನರು ನಮ್ಮಿಂದ ಸಾಕಷ್ಟು ನಿರೀಕ್ಷಿಸುತ್ತಾರೆ. ಇಂದು ನಮಗೆ ತುಂಬಾ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೇವರೇ, ಈ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯನ್ನು ನೀಡು’ ಎಂದು ಬರೆದುಕೊಂಡಿದ್ದಾರೆ.2012ರಲ್ಲಿ ಸ್ಥಾಪನೆಯಾದ ಎಎಪಿಯು, 10 ವರ್ಷಗಳ್ಲಲೇ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಿಟ್ಟಿಸಿದೆ.ಸದ್ಯ ದೆಹಲಿ ಮತ್ತು ಪಂಜಾಬ್‌ನಲ್ಲಿ ಈ ಪಕ್ಷದ ಸರ್ಕಾರಗಳು ಅಸ್ತಿತ್ವದಲ್ಲಿದ್ದು, ಗುಜರಾತ್‌ನಲ್ಲಿ ಐವರು ಮತ್ತು ಗೋವಾದಲ್ಲಿ ಇಬ್ಬರು ಶಾಸಕರಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…