ಕಠ್ಮಂಡು : ಮೌಂಟ್ ಎವರೆಸ್ಟ್ ಬಳಿ ಇಂದು ಬೆಳಗ್ಗೆ ನಾಪತ್ತೆಯಾಗಿದ್ದ ಆರು ಜನರಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು ಹೆಲಿಕಾಪ್ಟರ್ ನ ಅವಶೇಷಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ತಂಡವು ಅಪಘಾತದ ಸ್ಥಳದಿಂದ ಐದು ಮೃತದೇಹಗಳನ್ನು ಹೊರತೆಗೆದಿದೆ. ಖಾಸಗಿ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪರ್ವತ ಪ್ರದೇಶವಾದ ಸೊಲುಖುಂಬು ಜಿಲ್ಲೆಯ ಲಂಜುರಾದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಬೆಟ್ಟದ ಮೇಲಿರುವ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇದು ಪತನಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.ಲಾಮ್ಜುರಾ ಪ್ರದೇಶದ ಚಿಹಂದಂಡದಲ್ಲಿ ಹೆಲಿಕಾಪ್ಟರ್ ಪತನಗೊಳ್ಳುವ ಕೆಲವೇ ಸೆಕೆಂಡುಗಳ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
ಮನಂಗ್ ಏರ್ ಫ್ಲೀಟ್ ನ ಒಂದು ಭಾಗವಾದ ಹೆಲಿಕಾಪ್ಟರ್ ಸೊಲುಖುಂಬು ಜಿಲ್ಲೆಯ ಸುರ್ಕಿಯಿಂದ ಬೆಳಿಗ್ಗೆ 9.45 ಕ್ಕೆ ರಾಜಧಾನಿ ಕಠ್ಮಂಡುವಿಗೆ ಹೊರಟಿತು ಹಾಗೂ 15 ನಿಮಿಷಗಳಲ್ಲಿ ತನ್ನ ಸಂಪರ್ಕವನ್ನು ಕಳೆದುಕೊಂಡಿತು ಎಂದು ದಿ ಕಠ್ಮಂಡು ಪೋಸ್ಟ್ ನಲ್ಲಿ ವರದಿ ಮಾಡಿದೆ.
ಸೊಲುಖುಂಬು ಜಿಲ್ಲೆಯ ಲಿಖುಪಿಕೆ ಗ್ರಾಮೀಣ ಪುರಸಭೆಯ ಲಾಮ್ಜುರಾದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.
ಹೆಲಿಕಾಪ್ಟರ್ ನಲ್ಲಿ ಐವರು ವಿದೇಶಿ ಪ್ರಜೆಗಳಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೆಲಿಕಾಪ್ಟರ್ ನಲ್ಲಿ ಒಟ್ಟು ಆರು ಮಂದಿ ಇದ್ದರು. ಹಿರಿಯ ಕ್ಯಾಪ್ಟನ್ ಚೆಟ್ ಗುರುಂಗ್ ಅವರು ಪೈಲಟ್ ಆಗಿದ್ದಾರೆ ಎಂದು Himalayan Times ಪತ್ರಿಕೆಯು ಮೂಲವನ್ನು ಉಲ್ಲೇಖಿಸಿ ವರದಿ ಮಾಡಿದೆ.
ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…
ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…