BREAKING NEWS

ಹಾಸನದಲ್ಲಿ ಮಿಕ್ಸಿ ಸ್ಫೋಟ: ಇಬ್ಬರು ಪೊಲೀಸರ ವಶಕ್ಕೆ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಕಚೇರಿಗೆ ಮಿಕ್ಸಿ ಬಾಕ್ಸ್ ಪಾರ್ಸೆಲ್ ಗೆ ಬಂದಿತ್ತು. ಅಂಗಡಿ ಮಾಲೀಕ ಶಶಿ ಬಾಕ್ಸ್ನಲ್ಲಿ ನಮೂದಿಸಲಾದ ಹೆಸರಿಗೆ ನೀಡಿದ್ದರು. ಆದರೆ ಆ ವ್ಯಕ್ತಿ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಡಿಟಿಡಿಸಿ ಅಂಗಡಿಗೆ ವಾಪಾಸ್ ನೀಡಿದ್ದಾನೆ. ವಾಪಸ್ ಪಡೆಯುವ ವೇಳೆ ಶಶಿ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಿಕ್ಸಿ ಏಕಾಏಕಿ ಸ್ಫೋಟಗೊಂಡಿದೆ.

ಸ್ಫೋಟಗೊಂಡ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿಪುಡಿಯಾಗಿದ್ದು, ಗೋಡೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಮಾಲೀಕ ಶಶಿ ಅವರ ಕೈ, ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್, “ಕೊರಿಯರ್ ಆಫೀಸ್ನಲ್ಲಿ ಕೆಲಸ ಮಾಡುವ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಮಿಕ್ಸಿಯ ಬ್ಲೇಡ್ನಿಂದ ಅವರಿಗೆ ಪೆಟ್ಟಾಗಿದೆ ʼʼ ಎಂದು ತಿಳಿಸಿದ್ದಾರೆ.

“ಮೈಸೂರಿನಿಂದ ಎಫ್ಎಸ್ಎಲ್ ಅಧಿಕಾರಿಗಳು ಹಾಸನಕ್ಕೆ ಆಗಮಿಸಿದ್ದು ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನುವ ಮಾಹಿತಿ ಇದೆ. ಎಲ್ಲವನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗುವುದು ಬೇಡ. ಮಿಕ್ಸಿ ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋಟಗೊಂಡಿದೆಯೋ ಅಥವಾ ಬೇರೆ ಕಾರಣ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ. ಸದ್ಯಕ್ಕೆ ಯಾವುದೇ ಆತಂಕ ಇಲ್ಲ,” ಎಂದು ಎಸ್‌ ಪಿ ತಿಳಿಸಿದ್ದಾರೆ.

andolana

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

6 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

7 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

7 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

7 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

8 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

8 hours ago