ತಮಿಳುನಾಡು ಸಿಎಂ ಆಗಿ ಡಿಎಂಕೆ ಸ್ಟಾಲಿನ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ: ತಮಿಳುನಾಡು ರಾಜ್ಯದ ಮುಖ್ಯಮಂತ್ರಿಯಾಗಿ ಡಿಎಂಕೆ ಪಕ್ಷದ ಎಂ.ಕೆ.ಸ್ಟಾಲಿನ್‌ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ಚೆನ್ನೈನ ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರು ಪ್ರಮಾಣ ವಚನ ಬೋಧಿಸಿದರು. ಸ್ಟಾಲಿನ್‌ ಸಂಪುಟದಲ್ಲಿ ಇಂದು 33 ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

× Chat with us