ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಅಪ್ಪಚ್ಚು ರಂಜನ್‌ ಅಸಮಾಧಾನ

ಕೊಡಗು: ಜಿಲ್ಲೆಯ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡದೇ ಕಡೆಗಣಿಸಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾವಾರು, ಸಾಮಾಜಿಕ ನ್ಯಾಯದ ಪ್ರಕಾರ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದೆ. ಆದರೆ, ಒಂದೊಂದು ಜಿಲ್ಲೆಗೆ ಮೂರ್ನಾಲ್ಕು ಸಚಿವ ಸ್ಥಾನ ಸಿಕ್ಕಿದೆ. ಟೇಕ್ ಇಟ್ ಆ್ಯಸ್ ಗ್ರಾಂಟೆಡ್ ಎಂಬಂತಾಗಿದೆ. ಇದು ಸರಿಯಾದ ಕ್ರಮವಲ್ಲ ಎಂದು ಬೇಸರಿಸಿದರು.

ಈ ಬಗ್ಗೆ ಸಂಸದರು ಕೂಡ ಮೌನವಾಗಿದ್ದಾರೆ. ಎಂಪಿ ಜಾಣ ಮೌನ ತಾಳಿದ್ದಾರೆ. ಅವರು ಸರ್ಕಾರಕ್ಕೆ ಒತ್ತಡ ಹಾಕಬೇಕಿತ್ತು ಎಂದು ಸಂಸದ ಪ್ರತಾಪಸಿಂಹ ವಿರುದ್ಧ ಬೇಸರ ವ್ಯಕ್ತಪಡಿಸಿದರು.

× Chat with us