BREAKING NEWS

ಅಧಿಕಾರಿಗಳ ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆದ ಶಾಸಕ ಬಸವರಾಜ ರಾಯರಡ್ಡಿ

ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅವರು, ”ಜೆಸ್ಕಾಂ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಉಪಕರಣಗಳ ಪೂರೈಕೆಯೂ ವಿಳಂಬವಾಗುತ್ತಿದ್ದು, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆಯಬೇಕು” ಎಂದು ಆಗ್ರಹಿಸಿದ್ದಾರೆ.

‘ರೈತರ ಜಮೀನುಗಳ ನೀರಾವರಿ ಪಂಪ್‌ಸೆಟ್‌ಗಳಿಗೆ ಜೆಸ್ಕಾಂ ವಿದ್ಯುತ್‌ ಸರಬರಾಜು ಮಾಡುತ್ತಿದೆ. ಗಂಗಾ ಕಲ್ಯಾಣ ಯೋಜನೆಯ ರೈತರ ಪಂಪ್‌ಸೆಟ್‌ಗಳು ಕೂಡ ಇವೆ. ಹಿಂದಿನ ಎರಡು ತಿಂಗಳುಗಳಿಂದ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯುತ್‌ ಸರಬರಾಜು ಉಪಕರಣಗಳ ಬದಲಾವಣೆಯಾಗಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

”ಕೊಪ್ಪಳ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 25 ಕೆವಿಎ, 63 ಕೆವಿಎ ಮತ್ತು 100 ಕೆವಿಎ ಟ್ರಾನ್ಸ್‌ಫಾರ್ಮ‌್ರಗಳ ಅಳವಡಿಕೆ ಮತ್ತು ಬದಲಾವಣೆ ಮಾಡಲು ಆಗಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲೇ ಮಳೆ ಕೊರತೆಯಿಂದಾಗಿ ಪರದಾಡುತ್ತಿರುವ ರೈತರಿಗೆ ಜೆಸ್ಕಾಂ ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ರೈತರಿಗೆ ಸಂಕಷ್ಟ ಹೆಚ್ಚಾಗಿದೆ” ಎಂದು ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನ ಸಳೆದಿದ್ದಾರೆ.

”ಮುಂಗಾರು ಹಂಗಾಮಿನಲ್ಲಿ ಸರಿಯಾಗಿ ಮಳೆಯಾಗದ ಕಾರಣ ಬೆಳೆ ಸಂಪೂರ್ಣವಾಗಿ ಒಣಗಿ ಹೋಗುತ್ತಿವೆ. ಇರುವ ಬೆಳೆಗಳನ್ನಾದರೂ ಉಳಿಸಿಕೊಳ್ಳಬೇಕು ಎಂದು ರೈತರು ಪಂಪ್‌ಸೆಟ್‌ಗಳ ಮೂಲಕ ನೀರು ಹರಿಸುತ್ತಿದ್ದಾರೆ. ಎಲ್ಲ ರೈತರು ಏಕಾಏಕಿ ಒಂದೇ ಸಮಯದಲ್ಲಿ ಪಂಪ್‌ಸೆಟ್‌ ಚಲಾವಣೆ ಮಾಡುತ್ತಿರುವ ಕಾರಣ ಓವರ್ ಲೋಡ್ ಆಗಿ ಟ್ರಾನ್ಸ್‌ಫಾರ್ಮರ್‌ ಗಳು ಸುಟ್ಟು ಹೋಗುತ್ತಿವೆ. ಆದ್ದರಿಂದ ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸರಬರಾಜು ಮಾಡಲು ಹೆಚ್ಚುವರಿ ಸಾಮರ್ಥ್ಯದ ಟ್ರಾನ್ಸ್‌ಫಾರ್ಮ‌್ರಗಳನ್ನು ಅಳವಡಿಸಬೇಕಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಯಲಬುರ್ಗಾ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಟ್ರಾನ್ಸ್‌ಫಾರ್ಮ‌್ರಗಳು ಸುಟ್ಟು ಹೋಗಿವೆ. ಆದ್ದರಿಂದ ಜೆಸ್ಕಾಂ ವ್ಯಾಪ್ತಿಯ ಅಧಿಕಾರಿಗಳು, ಇಲಾಖೆ ಸಚಿವರನ್ನು ಒಳಗೊಂಡ ಸಭೆ ನಡೆಸಬೇಕು” ಎಂದು ಬಸವರಾಜ ರಾಯರಡ್ಡಿ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಶಾಸಕರ ಪತ್ರ: ಡಿ. ಕೆ.ಶಿವಕುಮಾರ್‌ ಸ್ಪಷ್ಟನೆ

ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, “ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?. ಪಕ್ಷದ ಒಳಗೆ ಶಿಸ್ತು ಇದೆ ಯಾವುದೇ ತೊಂದರೆ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ” ಎಂದು ಸ್ಪಷ್ಟನೆ ನೀಡಿದರು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago