ನೆನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.
ಚಿಕ್ಕಬಳ್ಳಾಪುರದ ಜನಪ್ರಿಯ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ ಎನ್ನುವಂತೆ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಇವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಎರಡು ದಿನ ಕಾಯಿರಿ ನೋಡೋಣ ಎಂದಷ್ಟೇ ಅವರು ಹೇಳಿ ಅಚ್ಚರಿ ಮೂಡಿಸಿದ್ದರು. ಕೊನೆಗೂ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ.
ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನು ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ನೀಡಲು ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರಕ್ಕೆ ಸಾಮಾನ್ಯರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ.
ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ದೊಡ್ಮನೆ ಒಳಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರಿಗೆ ಬಿಗ್ ಬಾಸ್ ಮನೆಗೆ ಸ್ವಾಗತ ಮಾಡಿದ್ದಾರೆ. ಪ್ರದೀಪ್ ಅವರನ್ನು ಕಂಡು ದೊಡ್ಮನೆ ಸದಸ್ಯರು ಕುಣಿದು ಕುಪ್ಪಳ್ಳಿಸಿದ್ದಾರೆ. ಅವರೊಂದಿಗೆ ಪ್ರದೀಪ್ ಕೂಡ ಡಾನ್ಸ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು,ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು ಎಂದು ಮಾತನಾಡಿದರೆ, ಅದಕ್ಕೆ ಪ್ರದೀಪ್, ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು ಎಂದು ಉತ್ತರಿಸಿದ್ದಾರೆ. ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…