BREAKING NEWS

ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ಟಿಕೆಟ್ ಗಾಗಿ ದುಂಬಾಲು ಬೀಳುತ್ತಿದ್ದಾರೆ : ಡಿಕೆಶಿ

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು ನಮಗೆ ಕಷ್ಟವಾಗುವಷ್ಟು ಒತ್ತಡವಿದೆ. ಅವರಾಗಿಯೇ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಯವರು ಸರ್ಕಾರ ರಚನೆ ಮಾಡಿದ್ದು ಹೇಗೆ ? ನಮ್ಮ ಹಾಗೂ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಂಡು ಅಲ್ಲವೇ. ಖುದ್ದು ಬಸವರಾಜ ಬೊಮ್ಮಾಯಿ ಯಾವ ಪಕ್ಷದವರು, ಜನತಾದಳದಲ್ಲಿ ಇದ್ದವರಲ್ಲವೇ ? ಕಾಂಗ್ರೆಸ್ ಸೇರಲು ಬಿಜೆಪಿಯ ಇನ್ನೂ ಎಷ್ಟು ಜನ ಮುಂದೆ ಬರುತ್ತಿದ್ದಾರೆ ಎಂದು ಸದ್ಯಕ್ಕೆ ನಾನು ಹೇಳುವುದಿಲ್ಲ ಎಂದು ಮತ್ತೊಂದು ಬಾಂಬ್ ಸಿಡಿಸಿದರು.
ವಿಧಾನಸಭೆ ಚುನಾವಣೆಗೆ ನಾವು ಮೂರು ತಿಂಗಳ ಹಿಂದೆಯೇ ಸಿದ್ಧವಾಗಿದ್ದೇವೆ. ಎಷ್ಟು ಬೇಗ ಚುನಾವಣೆ ನಡೆಯುತ್ತದೆಯೋ ಅಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮೀಸಲಾತಿ ವಿಷಯದಲ್ಲಂತೂ ಜನಾಕ್ರೋಶ ಹೆಚ್ಚಾಗಿದೆ. ಯಾರಿಗೂ ಸಮಧಾನ ಇಲ್ಲ. ಈ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳು ನ್ಯಾಯಲಯದಲ್ಲಿ ನಿಲ್ಲುವುದಿಲ್ಲ. ಬಿಜೆಪಿಯವರು ಮಾಡಿರುವ ತಪ್ಪನ್ನು ನಾವು ಅಧಿಕಾರಕ್ಕೆ ಬಂದಾಗ ಸರಿ ಪಡಿಸುತ್ತೇವೆ. ಸರ್ವರಿಗೂ ಸಮಪಾಲು, ಸಮಬಾಳು ಮಾದರಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಅವಕಾಶಗಳ ಹಂಚಿಕೆ ಮಾಡಲಾಗುವುದು ಎಂದರು.
ಬಿಜೆಪಿಯವರು ಕೆಲ ಸಮುದಾಯಕ್ಕೆ ಅನ್ಯಾಯ ಮಾಡಿ ತಮ್ಮ ಮನೆಯ ಆಸ್ತಿ ಎಂಬಂತೆ ಹಂಚಿಕೊಂಡಿದ್ದಾರೆ. ಯಾವ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗ ಪಡಿಸಲಿ. ಯಾವ ಸಮಿತಿ ವರದಿ ನೀಡಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದೆಯೇ ? ಸದಾಶಿವ ಆಯೋಗವನ್ನು ರಚನೆ ಮಾಡಿದ್ದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ. ಆ ವರದಿ ಏನಿದೆ ಎಂದು ಜನರ ಮುಂದಿಡಿ, ಬೇರೆಯವರಿಗೆ ತೊಂದರೆ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಜೇನುಗೂಡಿಗೆ ಕೈ ಹಾಕಿಲ್ಲ, ಕಡಜದ ಗೂಡಿಗೆ ಕೈ ಇಟ್ಟಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಭ್ರಷ್ಟ ಆಡಳಿತ ತೊಲಗಿದರೆ ಸಾಕು ಎಂದು ಜನ ಆಕ್ರೋಶಗೊಂಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಿ, ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಹೇಳಿತ್ತು. ಅದ್ಯಾವುದನ್ನು ಮಾಡಿಲ್ಲ. ನಾವು ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವಶಕ್ತಿ ಯೋಜನೆಗಳ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಭರವಸೆಗಳನ್ನು ನೀಡಿದ್ದೇವೆ ಎಂದರು.
ನಮ್ಮ ಭರವಸೆಗಳನ್ನು ಸುಳ್ಳು ಎಂದು ಹೇಳುವ ಬಿಜೆಪಿ 2013-14ರಲ್ಲಿ ಯಾವ ಭರವಸೆಗಳನ್ನು ನೀಡಿತ್ತು, ಆಗ ಏನೆಂದು ಜಾಹಿರಾತು ನೀಡಿತ್ತು ಎಂದು ತೆಗೆದು ನೋಡಲಿ. ಏಳರಿಂದ ಎಂಟು ಗಂಟೆ ವಿದ್ಯುತ್ ಸರಬರಾಜು, ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿದೆಯೇ ಎಂದು ಪ್ರಶ್ನಿಸಿದರು.
ಇಂದಿನಿಂದ ಬಿಜೆಪಿ ಸರ್ಕಾರದ ಅಂತ್ಯದ ದಿನಗಳು ಆರಂಭವಾಗಿವೆ, 60 ದಿನದಲ್ಲಿ ಕೊನೆಯಾಗಲಿದೆ. ಕಾಂಗ್ರೆಸ್ ನಿಶ್ಚಲ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಜನರಿಗೆ ಎಲ್ಲಾ ಹಂತದಲ್ಲೂ ಸುಳ್ಳು ಹೇಳುತ್ತಾ ಬಂದಿದೆ. ಮೀಸಲಾತಿ ಹಂಚಿಕೆಯಷ್ಟೆ ಅಲ್ಲ, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ಅನುಮತಿ ನೀಡುವ ವಿಷಯದಲ್ಲೂ ಸುಳ್ಳು ಹೇಳಲಾಗಿದೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ಭಾರಿ ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರು ಕೇಂದ್ರವನ್ನು ಕೊಂಡಾಡಿದರು. ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಎರಡು ರಾಜ್ಯಗಳ ವಿವಾದವನ್ನು ಅಂತ್ಯಗೊಳಿಸಿದ್ದಕ್ಕಾಗಿ ಕರ್ನಾಟಕದ ಬಿಜೆಪಿ ನಾಯಕರಿಗೆ ಅಭಿನಂದನೆ ತಿಳಿಸಿದ್ದಾರೆ. ನಿನ್ನೆ ಗೋವಾದ ವಿಧಾನಸಭೆಯಲ್ಲಿ ನೀಡಲಾಗಿರುವ ಲಿಖಿತ ಉತ್ತರದಲ್ಲಿ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿ ಪ್ರತಿಹಂತದಲ್ಲೂ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

lokesh

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

2 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

4 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

4 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

4 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

4 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

4 hours ago