ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ.
ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಹುಲಿಯನ್ನು ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕೂತಿದೆಯೋ.. ಅಯ್ಯೋ ಪಾಪ.! ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.ಇನ್ನು ಕೆಲವೇ ದಿನಗಳಲ್ಲಿ ‘ಬಂಡಿಪುರ ಉಳಿಸಿ’ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ನರೇಂದ್ರ ಮೋದಿ ಜೀ ಎಂದು ಟ್ವೀಟ್ ಮೂಲಕ ಕುಟುಕಿದ್ದಾರೆ.