BREAKING NEWS

ಮೋದಿ ವಿಷ ಸರ್ಪ ಇದ್ದಂಗೆ ನೆಕ್ಕಿದ್ರೆ ಸತ್ತ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ, ಗದಗ ಜಿಲ್ಲೆಯ‌ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಭಾಷಣದ ವೇಳೆ, ಪ್ರಧಾನಿ ಮೋದಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ನಿಮ್ಮ ಮನೆಯಲ್ಲಿ ದೇಶಕ್ಕಾಗಿ‌ ಒಂದೂ‌ ನಾಯಿ‌ ಕೂಡ ಸತ್ತಿಲ್ಲ. ದೇಶಕ್ಕೆ ಬಿಜೆಪಿಯವರ ಕೊಡಿಗೆ ಏನು ಅಂತಾ ಹೇಳಲಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಉಚಿತ ಅಕ್ಕಿ ಕೊಡುವ‌ ಕೆಲಸ ಮಾಡಿದ್ದು ಸೋನಿಯಾ ಗಾಂಧಿ. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಮಾಡಿದ ಸಾಧನೆ ಅಂದ್ರೆ 40% ಕಮಿಷನ್​​. ಇಂತಹವರನ್ನು ಮೋದಿ ತನ್ನ ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಒಬ್ಬ ಪ್ರಧಾನಿಯಾಗಿ ಹಳ್ಳಿ, ತಾಲೂಕಿಗೆ ಬಂದು ಓಡಾಡುತ್ತಿದ್ದಾರೆ. ಮೋದಿ‌ ಮುಖ ನೋಡಿ‌ ಮತ ಹಾಕಿ ಅಂತೀರಾ. ನೀವು ರಾಜ್ಯದ ಮುಖ್ಯಮಂತ್ರಿ ಆಗ್ತೀರಾ, ಮುನ್ಸಿಪಾಲ್ಟಿ, ಮೇಯರ್​, ಸಿಎಂ, ಪ್ರಧಾನಿ ಎಲ್ಲವೂ ನೀವೇ ಆಗ್ತೀರಾ. ಆಸೆ ಬುರುಕ ಮೋದಿ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಮೋದಿ ದೊಡ್ಡ ಸುಳ್ಳುಗಾರ : ಕಪ್ಪು ಹಣ ತಂದು 15 ಲಕ್ಷ ಕೊಡ್ತಿನಿ ಅಂದ್ರು. ಇನ್ನೂ ಕೊಟ್ಟಿಲ್ಲ. ಎಲ್ಲ ಹಣ ಅದಾನಿ ಹತ್ತಿರ ಇಟ್ಟಾರೆನೋ. ಉದ್ಯೋಗ ಕೊಟ್ಟಿಲ್ಲ. 18 ಕೋಟಿ ಯುವಕರಿಗೆ ನೌಕರಿ‌ ಕೊಡಬೇಕಿತ್ತು. ಸುಳ್ಳಿನ ಸರ್ದಾರ. ಹಗಲಿಗೆ ರಾತ್ರಿ, ರಾತ್ರಿಗೆ ಹಗಲು ಅಂತಾನೆ. ಡಬಲ್ ಇಂಜಿನ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜೀನ್ ಯಾಕೇ ನೌಕರಿ ಕೊಡ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರ್ಕಾರ ಇದ್ದಾಗ ದೊಡ್ಡ ದೊಡ್ಡ ಡ್ಯಾಂ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ‌ ಮೋದಿ ಏನ್ ಮಾಡಿದ್ದಾರೆ ಅಂತ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉರಿಬಿಸಿಲಿನಲ್ಲಿ ಜನ ನಿಂತಿದ್ದನ್ನು ನೋಡಿದ್ರೆ ಬದಲಾವಣೆ ಪಕ್ಕಾ : ಕರ್ನಾಟಕ ಚುನಾವಣೆ ಗೆದ್ದರೆ ಇಡೀ ದೇಶದಲ್ಲೇ ಗೆಲ್ಲುತ್ತೇವೆ. ದೇಶದಲ್ಲಿ ಮತ್ತೆ ಬದಲಾವಣೆ ಆಗಲಿದೆ. ಉರಿಬಿಸಿಲಿನಲ್ಲಿ ಜನ ನಿಂತಿದ್ದನ್ನು ನೋಡಿದ್ರೆ ಬದಲಾವಣೆ ಪಕ್ಕಾ ಅನಿಸುತ್ತೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನರೇಗಲ್​​ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

lokesh

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

3 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

3 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

4 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

4 hours ago