BREAKING NEWS

ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಒಪ್ಪುತ್ತಿಲ್ಲ: ಸಿಎಂ ಆಕ್ರೋಶ

ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

ವಿಧಾನ ಪರಿಷತ್ ನಲ್ಲಿ 2023-24 ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ.

ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.

ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು.

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೆ: ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಹೆಚ್.ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲಾ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಹೆಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು.

ಭಾಷಣದ ಹೈಲೈಟ್ಸ್:

* ಮಹಾತ್ನಗಾಂಧಿ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ*

*1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, “ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ” ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ.

* ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು.

* ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತಾರೆ ಎಂದರು.

* ಶ್ರಮಿಕರ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ.

andolanait

Recent Posts

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

2 mins ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

4 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

5 mins ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

11 mins ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

20 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

27 mins ago