ನವದೆಹಲಿ : ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ.
ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ.
“ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳನ್ನು ಟೀಕಿಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ ಜನರು ನಮ್ಮ ಸರಕಾರದ ಮೇಲೆ ನಂಬಿಕೆಯನ್ನು ಮತ್ತೆ ಮತ್ತೆ ತೋರಿಸಿದ್ದಾರೆ. ದೇಶದ ಕೋಟ್ಯಂತರ ಜನರಿಗೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿದ್ದೇನೆ ಎಂದು ಹೇಳಿದರು.
ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿತ್ತು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…