ಕಲಬುರಗಿ : ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವ 75 ಭರವಸೆಗಳನ್ನು ಬಜೆಟ್ ಮೂಲಕ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ ಸಿಎಂ, ಪ್ರಧಾನಿ ಸೇರಿದಂತೆ ಬಿಜೆಪಿಯ ನಾಯಕರು ಈ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.
ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವು ಯಾರೂ ಅಲ್ಲ ಎಂದು ಟೀಕಿಸಿದ ಸಿಎಂ, ಈ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದು, ಭ್ರಷ್ಟಚಾರ ಹಾಗೂ ನಿರುದ್ಯೋಗವನ್ನು ಹೆಚ್ಚಿಸುವುದರ ಜೊತೆಗೆ ಬಡವರಿಗೆ ದಲಿತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಸರ್ಕಾರ ಆಳಿತದಲ್ಲಿದ್ದಾಗ ಕಲ್ಯಾಣ ಕರ್ನಾಟಕದ 99,600 ಸೇರಿದಂತೆ ರಾಜ್ಯದಲ್ಲಿ 14.52 ಲಕ್ಷ ಮನೆ ಕಟ್ಟಿಸಿದ್ದೆವು ಆದರೆ ಬಿಜೆಪಿ ಸರ್ಕಾರ ಕಕ ಭಾಗದಲ್ಲಿ 19000 ಹಾಗೂ ರಾಜ್ಯದಲ್ಲಿ 7 ಲಕ್ಷ ಮನೆ ಕಟ್ಟಿಸಿದ್ದಾರೆ. ಕಕ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ತನ್ನ ಬದ್ದತೆ ತೋರಿಸಿದೆ ಎಂದು ಹೇಳಿದ ಸಿಎಂ, ಬಿಜೆಪಿ ಸರ್ಕಾರ ಈ ಭಾಗದ ಹೆಸರನ್ನು ಮಾತ್ರ ಬದಲಾಯಿಸಿದೆ ಎಂದರು.
ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 55 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರು ದೇವಸ್ಥಾನ ಸೇರಿದಂತೆ ಅವಶ್ಯಕತೆ ಇರುವ ಕಡೆಗೆ ಹೋಗುತ್ತಿದ್ದಾರೆ. ಇದು ಬಿಜೆಪಿ ನಾಯಕರ ಹೊಟ್ಟೆ ಉರಿಗೆ ಕಾರಣವಾಗಿದೆ ಎಂದರು.
ಯೂರೋಪ್ ದೇಶದಲ್ಲಿ ಗ್ಯಾರಂಟಿಗಳನ್ನು ನೋಡಿ ನಾವು ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದೇವೆ. ಇದೇ ರೀತಿ ದೇಶದ ಬೇರೆ ಬೇರೆ ರಾಜ್ಯಗಳು ಕೂಡಾ ಗ್ಯಾರಂಟಿ ಯೋಜನೆ ಜಾರಿಗೆ ತರಲಿವೆ. ಇದು ಕರ್ನಾಟಕ ಮಾಡೆಲ್. ನಿಮ್ಮ ಗುಜರಾತ್ ಮಾಡೆಲ್ ಜಾರಿಗೆ ಬರಲು ನಾವು ಬಿಡಲ್ಲ ಎಂದು ಕುಟುಕಿದರು.
1.41 ಕೋಟಿ ಫಲಾನುಭವಿಗಳು ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ. ಜುಲೈ 1 ರಿಂದ ಪ್ರಾರಂಭವಾದ ಈ ಯೋಜನೆಯ ಅಡಿಯಲ್ಲಿ ಅಗಷ್ಟ್ ತಿಂಗಳಲ್ಲಿ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಶೂನ್ಯ ದರದ ಬಿಲ್ ಒದಗಿಸಲಿದೆ. ಈ ಯೋಜನೆ ಖರ್ಗೆ ಅವರು ಉಪಸ್ಥಿತರಿರಬೇಕು ಎಂದುಕೊಂಡು ಇಲ್ಲಿಯೇ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.
ಅನ್ನ ಭಾಗ್ಯ ಯೋಜನೆಯ ಜಾರಿಗೆ ವಿಚಾರದಲ್ಲಿ ಅಕ್ಕಿ ನೀಡದ ಕೇಂದ್ರ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಎಫ್ ಸಿ ಐ ಮೊದಲು ಅಕ್ಕಿ ಕೊಡುವುದಾಗಿ ಹೇಳಿ ಆಮೇಲೆ ನಿರಾಕರಿಸಿತು. ಬಿಜೆಪಿಗರು ಈ ವಿಚಾರದಲ್ಲಿ ರಾಜಕೀಯ ಮಾಡಿದರು ನಿಮಗೆ ನಾಚಿಕೆಯಾಗುವುದಿಲ್ಲವೇ ? ಎಂದರು.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ರಾಜ್ಯದ 1.28 ಕೋಟಿ ಮಹಿಳಿಯರಿಗೆ ಪ್ರತಿತಿಂಗಳು ರೂ 2000 ಕೊಡಲಿದ್ದೇವೆ. ಇಂತಹ ಯೋಜನೆಯನ್ನು ದೇಶದ ಯಾವುದೇ ರಾಜ್ಯಜಾರಿಗೆ ತಂದಿಲ್ಲ. ನುಡಿದಂತೆ ನಾವು ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿದರು.
ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗೆ ಬದ್ದವಾಗಿದ್ದು. ಈ ಭಾಗದ ಹಿರಿಯ ನಾಯಕ ಮಲ್ಲಕಾರ್ಜುನ ಖರ್ಗೆ ಅವರು ಹೇಳಿರುವಂತೆ ಬಿಡುಗಡೆಯಾಗುವ ರೂ 5000 ಕೋಟಿ ಅನುದಾನದ ಬಳಕೆ ಕುರಿತಂತೆ ಪರಿಶೀಲನೆ ಮಾಡಲಾಗುವುದು ಎಂದು ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುತ್ತದೆ ಆದರೆ ಅಭಿವೃದ್ದಿ ಮಾಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ, ನಾವು ಗ್ಯಾರಂಟಿ ಜಾರಿಗೊಳಿಸುವುದರ ಜೊತೆಗೆ ಅಭಿವೃದ್ದಿಯನ್ನೂ ಕೂಡಾ ಮಾಡಲಿದ್ದೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ನಾವು ಕೊಟ್ಟ ಭಾಷೆಯಂತೆ ಜನರಿಗೆ ನೀಡಿದ ವಾಗ್ಧಾನದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದ ಸಿಎಂ ಇಂದಿನ ಕಾರ್ಯಕ್ರಮದ ರೂವಾರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…
ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು…
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ…
ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ…