ಬೆಂಗಳೂರು : ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನೀತಿಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಆರಂಭವಾದ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೂ ದೇಶದ ಒಟ್ಟು ಸಾಲ 53.11 ಲಕ್ಷ ಕೋಟಿ ರೂ.ಗಳಿದ್ದವು. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ 9 ವರ್ಷಗಳಲ್ಲಿ 117 ಲಕ್ಷ ಕೋಟಿ ಸಾಲ ಮಾಡುವ ಮೂಲಕ ಒಟ್ಟು ಸಾಲವನ್ನು 170 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.
ಮನಮೋಹನ್‍ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಯಲ್ಲಿ ಕಚ್ಛಾ ತೈಲದ ಬೆಲೆ ಬ್ಯಾರೆಲ್‍ಗೆ 125 ಡಾಲರ್ ಇತ್ತು. ಆದರೂ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಿರಲಿಲ್ಲ. ಇತ್ತೀಚೆಗೆ ಕಚ್ಛಾತೈಲದ ಬೆಲೆ ಕಡಿಮೆಯಾಗಿದೆ. 2015-16ರಲ್ಲಿ 46 ಡಾಲರ್ ಇತ್ತು. ಇತ್ತೀಚೆಗೆ ಅದು 76 ಡಾಲರ್ ನಷ್ಟಾಗಿದೆ. ಆದರೂ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿಲ್ಲ. ಜೊತೆಗೆ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ವಿಧಿಸಿ ವರ್ಷಕ್ಕೆ 5 ಲಕ್ಷ ಕೋಟಿ ರೂ.ಗಳನ್ನು ಪರಿಗಣಿಸುವುದರಿಂದ ರಾಜ್ಯಸರ್ಕಾರಗಳೊಂದಿಗೆ ಹಂಚಿಕೆ ಮಾಡಿಕೊಳ್ಳುವಂತಿಲ್ಲ. ಕೇಂದ್ರಸರ್ಕಾರವೇ ಇದನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರಗಳ ದರ ಏರಿಕೆಯಿಂದ ಸಹಜವಾಗಿ ದೈನಂದಿನ ಬೆಲೆ ಏರಿಕೆಯಾಗಲಿವೆ. ಹಣದುಬ್ಬರದಿಂದ ಜನಸಾಮಾನ್ಯರು ಜೀವನ ಮಾಡಲಾಗದೆ ತತ್ತರಿಸುವಂತಾಗಿದೆ. ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಕನಿಷ್ಟ ಬೆಂಬಲ ಬೆಲೆಯನ್ನೂ ಕೂಡ ಸರಿಯಾಗಿ ನೀಡುತ್ತಿಲ್ಲ. ಹೀಗಾಗಿ ಕೃಷಿಕರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಇಂದಿನ ಯುವ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ದುರಾಡಳಿತ, ಬೆಲೆ ಏರಿಕೆ, ಭ್ರಷ್ಟಾಚಾರ, ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವ ಸಂಕಲ್ಪ ತೊಡಬೇಕು ಎಂದು ಹೇಳಿದರು.
ಮೋದಿಯವರ ಸರ್ಕಾರ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ರಿಂದ 22ಕ್ಕೆ ಸ್ಥಗಿತ ಮಾಡಿದೆ. ಆದರೆ ಬಡವರು ಬಳಸುವ ಹಾಲು, ಮೊಸರು, ಮಜ್ಜಿಗೆ, ಪೆನ್ನು, ಪೆನ್ಸಿಲ್, ದವಸ, ಧಾನ್ಯ, ಮಂಡಕ್ಕಿಗಳಿಗೆ ಜಿಎಸ್‍ಟಿ ತೆರಿಗೆ ಹಾಕಲಾಗಿದೆ ಎಂದು ಆರೋಪಿಸಿದರು.
ಮೋದಿಯವರ ಸರ್ಕಾರ ದೇಶದ ಆರ್ಥಿಕ ವ್ಯವಸ್ಥೆಯನ್ನಷ್ಟೇ ಅಲ್ಲ, ಸಾಮಾಜಿಕ ವ್ಯವಸ್ಥೆಯನ್ನು ಹಾಳುಗೆಡವಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ಆದಿವಾಸಿಗಳು ನೆಮ್ಮದಿ ಕಳೆದುಕೊಂಡು ಆತಂಕದಲ್ಲಿ ಬದುಕುವಂತಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವ್ಯವಸ್ಥೆಯನ್ನು ಧ್ವಂಸ ಮಾಡಲಾಗಿದೆ. ಕೋಮು ಆಧಾರಿತ ಸಂಘರ್ಷಗಳು ಹೆಚ್ಚಾಗಿದೆ. ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ ಎಂದು ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಸಮಾನತೆ, ಭ್ರಾತೃತ್ವ, ಸಂವಿಧಾನ ಆಶಯಗಳಿಗೆ ಬದ್ಧವಾಗಿದೆ. ಜನಸಾಮಾನ್ಯರಿಗೆ ಧೈರ್ಯ ಹಾಗೂ ಸ್ವಾಭಿಮಾನದಿಂದ ಬದುಕುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು. ನೂರಾರು ವರ್ಷಗಳಿಂದ ಭಾರತ ಪಾಲಿಸಿಕೊಂಡಿದ್ದ ವೈವಿಧ್ಯತೆಯಲ್ಲಿ ಏಕತೆ ಸಂಸ್ಕೃತಿಯನ್ನು ಬಿಜೆಪಿ, ಆರ್ ಎಸ್‍ಎಸ್, ಬಜರಂಗದಳ, ಹಿಂದೂ ಮಹಾಸಭೆಗಳು ಹಾಳು ಮಾಡಿವೆ. ದೇಶದಲ್ಲಿ ಶಾಂತಿಯ ವಾತಾವರಣ ಇಲ್ಲವಾಗಿದೆ ಎಂದು ದೂರಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಂಚಖಾತ್ರಿಗಳ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿದಾಗ ಇದರಿಂದ ಆರ್ಥಿಕ ದಿವಾಳಿಯಾಗಲಿದೆ ಎಂದು ಪ್ರಧಾನಿ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು ಟೀಕೆ ಮಾಡಿದರು. ಆದರೆ ನಮ್ಮ ಸರ್ಕಾರ ಕೊಟ್ಟ ಮಾತಿಗೆ ಬದ್ಧವಾಗಿ ನಡೆದುಕೊಂಡಿದೆ. 53 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಿ ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…