ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಇಲ್ಲಿನ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ, ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಮೇ 23ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದರು.
ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಗುಜರಾತ್ ಹೈಕೋರ್ಟ್ ಆದೇಶ ನೀಡಿತ್ತು. ಇದರ ಬೆನ್ನಲ್ಲೇ, ಏಪ್ರಿಲ್ 1 ಹಾಗೂ 2 ರಂದು ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ನಂತರ, ಈ ಇಬ್ಬರ ವಿರುದ್ಧ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪೀಯೂಷ್ ಪಟೇಲ್ ಅವರು ಏಪ್ರಿಲ್ 12ರಂದು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…