ನವದೆಹಲಿ: ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಏಪ್ರಿಲ್ 1 ರಿಂದ ಸುಮಾರು 384 ಔಷದಿಗಳು ಮತ್ತು 1,000 ಕ್ಕೂ ಹೆಚ್ಚು ಸೂತ್ರೀಕರಣಗಳ ದರ ಶೇಕಡಾ 11 ರಷ್ಡು ಏರಿಕೆಯಾಗಿರುವ ಬಗ್ಗೆ ಮಾದ್ಯಮಗಳು ವರದಿ ಮಾಡಿದ ಬಳಿಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಮೋದಿಯವರೇ, ನೀವು ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಭೂಪಾಲ್‌ನ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಮೋದಿ, ‘ನನ್ನ ವರ್ಚಸ್ಸನ್ನು ಹಾಳುಗೆಡವಲು ಕೆಲವರು ದೇಶದ ಒಳಗೆ ಮತ್ತು ಹೊರಗಿನ ಜನರೊಂದಿಗೆ ಶಾಮೀಲಾಗಿದ್ದಾರೆ ಮತ್ತು ಈ ಉದ್ದೇಶಕ್ಕಾಗಿ ಸುಪಾರಿ ನೀಡಿದ್ದಾರೆ’ ಎಂದು ಹೇಳಿದ್ದರು. ಮರುದಿನವೇ ಮೋದಿಯವರ ಈ ಆರೋಪಕ್ಕೆ ಖರ್ಗೆ ತಿರುಗೇಟು ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…