ಮೈಸೂರು: ಕರ್ನಾಟಕದಲ್ಲಿ ಪ್ರಧಾನಿ ಮೋದಿ ಮೇನಿಯಾ ಬಿಜೆಪಿ ಉತ್ಸಾಹ ಹೆಚ್ಚಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಮೋದಿ, ನಿನ್ನೆ ಬೆಂಗಳೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದರು. ಇದೀಗ ಮೈಸೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.
ಬೇಲೂರಿನಿಂದ ಮೈಸೂರುಗೆ ತೆರಳಿದೆ ಮೋದಿ, ರೋಡ್ ಶೋ ನಡೆಸಿದ್ದಾರೆ. ದಾರಿಯುದ್ದಕ್ಕೂ ಜನರು ಮೋದಿಗೆ ಹೂಮಳೆ ಸ್ವಾಗತ ನೀಡಿದ್ದಾರೆ. ಹಳೇ ಮೈಸೂರು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿರುವ ಮೋದಿ, ಸಾಂಸ್ಕೃತಿಕ ನಗರಿಯಲ್ಲಿ 4.3 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ.
ಮೈಸೂರಿನ ಓವಲ್ ಮೈದಾನಕ್ಕೆ ಆಗಮಿಸಿದ ಮೋದಿ ಕಾರಿನ ಮೂಲಕ ಮೈಸೂರು ವಿವಿ ಕ್ರಾಫರ್ಡ್ ಹಾಲ್‌ಗೆ ತೆರಳಿದರು. ವಿದ್ಯಾಪೀಠ ವೃತ್ತದಲ್ಲಿ ನಿಂತಿದ್ದ ತೆರೆದ ವಾಹನ ಏರಿದ ಮೋದಿಯನ್ನು ಸಚಿವ ರಾಮದಾಸ್ ಮೈಸೂರು ಪೇಟ ಹಾಗೂ ಕೇಸರಿ ಶಾಲು ತೊಡಿಸಿ ಸ್ವಾಗತಿಸಿದರು. ಬಳಿಕ ಮೋದಿ ಅಬ್ಬದ ರೋಡ್ ಶೋ ಆರಂಭಗೊಂಡಿತು.
ಮೋದಿ ಜೊತೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆಎಸ್ ಈಶ್ವರಪ್ಪ, ಎಸ್ ಎ ರಾಮದಾಸ್ ತೆರದ ವಾಹನದ ಮೂಲಕ ರೋಡ್ ಶೋನಲ್ಲಿ ಪಾಲ್ಗೊಂಡರು. ಮೋದಿ ರೋಡ್ ಶೋ ನೋಡಲು ಜನಸಾಗರವೇ ಹರಿದು ಬಂದಿತ್ತು. ಕಲಾ ತಂಡಗಳ ಪ್ರದರ್ಶನ ರೋಡ್ ಶೋ ಮೆರುಗು ಹೆಚ್ಚಿಸಿತ್ತು. ನಮ್ಮ ಮೋದಿ ನಮ್ಮ ಹೆಮ್ಮೆ ಸೇರಿದಂತೆ ಹಲವು ಪ್ಲೇಕಾರ್ಡ್‌ಗಳು, ಮೋದಿ ಮೋದಿ ಜಯಘೋಷ ಮೊಳಗಿತ್ತು.
ನಿನ್ನೆ ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ನಡೆಸಿದ್ದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಬೆಂಗಳೂರಲ್ಲಿ ಭರ್ಜರಿ ರೋಡ್‌ಶೋ ನಡೆಸಿದರು. ದೆಹಲಿಯಿಂದ ವಿಶೇಷವಾಗಿ ತರಿಸಲಾದ ತೆರದ ವಾಹನವು ಬುಲೆಟ್‌ಫ್ರೂಫ್‌ನಿಂದ ಕೂಡಿತು.
ಮಾಗಡಿ ರೋಡ್ ನೈಸ್ ಜಂಕ್ಷನ್‌ನಿಂದ ಆರಂಭಗೊಂಡ ರೋಡ್ ಶೋ ಸುಮನಹಳ್ಳಿ ಜಂಕ್ಷನ್‌ವರೆಗೆ ಸುಮಾರು 5.3 ಕಿ.ಮೀ. ನಡೆಯಿತು. ಸುಮಾರು ಒಂದು ಗಂಟೆ ಕಾಲ ನಡೆದ ರೋಡ್ ಶೋ ವೇಳೆ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳಲು ರಸ್ತೆಗಳ ಇಕ್ಕೆಲಗಳಲ್ಲಿ ಜನರು ನೆರೆದಿದ್ದರು. ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ಮೇಲೆ ಹೂವಿನ ಮಳೆಗರೆದು ಜೈಕಾರ ಕೂಗಿದರು. ರೋಡ್‌ಶೋನಲ್ಲಿ ಜನಸಾಗರವೇ ಹರಿದು ಬಂದಿತು.
ಬೆಳಗಾವಿಯಲ್ಲಿ ಪ್ರಚಾರ ಮುಗಿಸಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಬಳಿಯ ಹೆಲಿಪ್ಯಾಡ್‌ಗೆ ಬಂದಿಳಿದರು. ಬಳಿಕ ರಸ್ತೆಯ ಮೂಲಕ ಮಾಗಡಿ ರಸ್ತೆ ಜಂಕ್ಷನ್‌ಗೆ ತೆರಳಿದರು.
ಮಾಗಡಿ ರಸ್ತೆ ಜಂಕ್ಷನ್‌ನಿಂದ ರೋಡ್ ಶೋ ಆರಂಭವಾಗುತ್ತಿದ್ದಂತೆ ಮೋದಿ ಅವರಿಗೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನಸಾಗರದಿಂದ ಹೂಮಳೆ ಸ್ವಾಗತ ದೊರಕಿತು. ಜನರತ್ತ ಕೈ ಬೀಸಿದ ಮೋದಿಗೆ ಹೂವು ಹಾಕಿ ಜೈಕಾರ ಕೂಗಿದರು. ಮೋದಿಯ ಸ್ವಾಗತಕ್ಕಾಗಿ ಸಾಂಸ್ಕೃತಿಕ ಕಲಾತಂಡಗಳನ್ನು ಆಯೋಜನೆ ಮಾಡಲಾಗಿದ್ದು, ಈಸ್‌ವೆಸ್ಟ್ ಜಂಕ್ಷನ್ ಬಳಿಕ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಪ್ರದರ್ಶನ ಮಾಡಲಾಯಿತು. ರಸ್ತೆಯುದ್ದಕ್ಕೂ ಬಿಜೆಪಿ ಬಾವುಟ, ಕೇಸರಿ ಶಾಲು ರಾರಾಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…