ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು.
ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ (ಮಾನನಷ್ಟ ಆಗುವ ರೀತಿಯಲ್ಲಿ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…