ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು.
ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ (ಮಾನನಷ್ಟ ಆಗುವ ರೀತಿಯಲ್ಲಿ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…