ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ. 15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜು.10 ರಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಡಿಬಿಟಿ ಗೆ ಚಾಲನೆ ನೀಡಲಿದ್ದಾರೆ. ಇದರಿಂದ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಚಿವರ ಪ್ರಕಾರ ರಾಜ್ಯದಲ್ಲಿ 4 ಸದಸ್ಯರನ್ನೊಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು ಒಟ್ಟು 41 ಕೋಟಿ ಫಲಾನುಭವಿಗಳಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ.ಜಿ ಅಕ್ಕಿ ಕೊಡುವುದು ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಪೈಕಿ ಒಂದಾಗಿತ್ತು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…