BREAKING NEWS

ಬಾಲಕನ ಹೊಟ್ಟೆ ಬಗೆದು ಕರುಳು ಹೊರ ತೆಗೆದ ಮಂಗಗಳು

ಅಹಮದಾಬಾದ್ : ಮಂಗಗಳು ಹತ್ತು ವರ್ಷದ ಬಾಲಕನ ಹೊಟ್ಟೆ ಬಗೆದು ಕರುಳನ್ನು ಹೊರ ತೆಗೆದಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಮಂಗಗಳ ಭೀಕರ ದಾಳಿಗೆ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಗುಜರಾತ್ ನ ಗಾಂಧಿನಗರದ ಸಾಲ್ಕಿ ಗ್ರಾಮದ ದೀಪಕ್ ಠಾಕೂರ್ ಎಂದು ಗುರುತಿಸಲಾಗಿದೆ.

ದೀಪಕ್ ತನ್ನ ಸ್ನೇಹಿತರೊಂದಿಗೆ ಗ್ರಾಮದ ದೇವಾಲಯದ ಬಳಿ ಆಟವಾಡುತ್ತಿದ್ದ ವೇಳೆ ಮಂಗಗಳ ಗುಂಪು ಬಾಲಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿ ಆತನ ಹೊಟ್ಟೆಯನ್ನು ಬಗೆದು ಕರುಳನ್ನ ಆಚೆ ತೆಗೆದಿದ್ದವು, ಸ್ಥಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆಗೂ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಂಗಗಳು ಹಾಗೂ ಸಿಂಗಳಿಕಗಳು ಇವೆ. ಅವುಗಳನ್ನು ಹಿಡಿಯಲು ಪ್ರಯತ್ನಿಸುತ್ತಿದ್ದೇವೆ, ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago