Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

ಭಾರತದಿಂದ ಮತ್ತಷ್ಟು ಮಾನವೀಯ ನೆರವು : ಪ್ರಧಾನಿ ಮೋದಿಗೆ ಉಕ್ರೇನ್ ಅಧ್ಯಕ್ಷ ಪತ್ರ

ಹೊಸದಿಲ್ಲಿ : ರಷ್ಯಾ – ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್‌ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಈ ಇಬ್ಬರು ನಾಯಕಿಯರು ಅಭಿಪ್ರಾಯಗಳನ್ನು ಹಂಚಿಕೊಂಡರು. ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವ ಭರವಸೆಯನ್ನು ಕೊಡಲಾಗಿದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದರೆ, ಈ ಭೇಟಿ ಫಲಪ್ರದವಾಗಿದೆ ಎಂದು ಜಪರೊವಾ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!