ಹೊಸದಿಲ್ಲಿ : ರಷ್ಯಾ – ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಈ ಇಬ್ಬರು ನಾಯಕಿಯರು ಅಭಿಪ್ರಾಯಗಳನ್ನು ಹಂಚಿಕೊಂಡರು. ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವ ಭರವಸೆಯನ್ನು ಕೊಡಲಾಗಿದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದರೆ, ಈ ಭೇಟಿ ಫಲಪ್ರದವಾಗಿದೆ ಎಂದು ಜಪರೊವಾ ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…