ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.
ಮುಂಬೈನಲ್ಲಿ ಯಶ್‌ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್‌ರಾಜ್ ಭಾರತಿ ಸಮ್ಮಾನ್’ (ವೈಬಿಎಸ್) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನಾನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.
‘ನಾಗರಿಕರ ಜೀವನವನ್ನು ಸುಲಭಗೊಳಿಸುವುದೇ ಉತ್ತಮ ಆಡಳಿತದ ಗುರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.
ಯಶ್‌ರಾಜ್ ಭಾರತಿ ಸಮ್ಮಾನ್ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿರುವ ಯಶ್‌ರಾಜ್ ಸಂಶೋಧನಾ ಫೌಂಡೇಷನ್‌ನ ಕಾರ್ಯವನ್ನು ಸಚಿವರು ಶ್ಲಾಘಿಸಿದರು.
‘ಆರೋಗ್ಯ ಕ್ಷೇತ್ರದಲ್ಲಿನ ನಾವೀನ್ಯತೆ, ಜನರ ಜೀವನ ಪರಿವರ್ತನೆ ಮತ್ತು ನೈತಿಕ ಆಡಳಿತ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…