BREAKING NEWS

ಬಳಕೆಯಲ್ಲಿಲ್ಲದ 2 ಸಾವಿರಕ್ಕೂ ಹೆಚ್ಚಿನ ಕಾನೂನು ರದ್ದು: ಸಚಿವ ಜಿತೇಂದ್ರ ಸಿಂಗ್

ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.

ಮುಂಬೈನಲ್ಲಿ ಯಶ್‌ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್‌ರಾಜ್ ಭಾರತಿ ಸಮ್ಮಾನ್’ (ವೈಬಿಎಸ್‌) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನಾನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ನಾಗರಿಕರ ಜೀವನವನ್ನು ಸುಲಭಗೊಳಿಸುವುದೇ ಉತ್ತಮ ಆಡಳಿತದ ಗುರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.

ಯಶ್‌ರಾಜ್ ಭಾರತಿ ಸಮ್ಮಾನ್ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿರುವ ಯಶ್‌ರಾಜ್ ಸಂಶೋಧನಾ ಫೌಂಡೇಷನ್‌ನ ಕಾರ್ಯವನ್ನು ಸಚಿವರು ಶ್ಲಾಘಿಸಿದರು.

‘ಆರೋಗ್ಯ ಕ್ಷೇತ್ರದಲ್ಲಿನ ನಾವೀನ್ಯತೆ, ಜನರ ಜೀವನ ಪರಿವರ್ತನೆ ಮತ್ತು ನೈತಿಕ ಆಡಳಿತ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago