ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇದುವರೆಗೂ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಅನೇಕ ಕಡೆ ಬಸ್‍ಗಳ ಚಾಲಕರಿಲ್ಲ ಎನ್ನುವ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸದಾಗಿ 13 ಸಾವಿರ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
ಇದರ ಜತೆಗೆ 4 ಸಾವಿರ ಹೊಸ ಬಸ್‍ಗಳನ್ನು ಖರೀದಿ ಮಾಡುವುದಾಗಿ ಅವರು ಹೇಳಿದರು.
ರಾಜ್ಯಪಾಲರ ಭಾಷಣದ ಮೇಲೆ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಕೋವಿಡ್ ಸಮಯದಲ್ಲಿ ರಾಜ್ಯಾದ್ಯಂತ ಸ್ಥಗಿತಗೊಂಡಿದ್ದ ಎಲ್ಲ ಬಸ್ ಮಾರ್ಗಗಳನ್ನು ಮತ್ತೆ ಆರಂಭಿಸಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.
ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇವಸ್ಥಾನ, ಯಾತ್ರಾ ಸ್ಥಳ ಸೇರಿದಂತೆ ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಸ್‍ಗಳ ಕೊರತೆಯೂ ಎದುರಾಗಿದೆ. ಹೀಗಾಗಿ ಚಾಲಕ, ನಿರ್ವಾಹಕ, ತಂತ್ರಜ್ಞರ ನೇಮಕ ಹಾಗೂ ಹೊಸ ಬಸ್‍ಗಳ ಖರೀದಿಗೆ ನಿರ್ಧರಿಸಿರುವುದಾಗಿ ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ 5 ಗ್ಯಾರಂಟಿಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನವೇ ಯೋಜನೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…