ರಬತ್ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ.
ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಕತಾರ್‌ನ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಭೂಕಂಪಕ್ಕೆ ಸಿಲುಕಿ 2,562 ಜನರು ಗಾಯಗೊಂಡಿದ್ದಾರೆ. ಮರ್ರಾಕೇಶ್‌ನಿಂದ 60 ಕಿ.ಮೀ. ದೂರದಲ್ಲಿರುವ ತಾಫೆಘಗ್ಟೆ ಎಂಬ ಪರ್ವತ ಹಳ್ಳಿಯಲ್ಲಿನ ಪ್ರತಿ ಕಟ್ಟಡವೂ ಭೂಕಂಪದಿಂದಾಗಿ ನಾಶವಾಗಿದೆ.
ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ನೆಲಸಮವಾಗಿ ಅಪಾರ ಸಾವು-ನೋವಾಗಿತ್ತು. ದುರಂತಕ್ಕೆ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ವಿಷಾದ ವ್ಯಕ್ತಪಡಿಸಿದ್ದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿದ್ದರು. ಮೊರಾಕ್ಕೋಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…