BREAKING NEWS

UPSC ಮೂಲಕ ನೇಮಕವಾಗುವ ಬಹುತೇಕ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವ

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಲಿಪಾಲ್‌ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್‌ಸಿ ಮೂಲಕ ನೇಮಕವಾಗುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಯುಪಿಎಸ್‌ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ‘ ಎಂದು ಹೇಳಿದ್ದಾರೆ.

‘ಯುಪಿಎಸ್‌ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿತ್ತು. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಕೋಳಿ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಗಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್‌ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago