Mysore
20
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಬಸ್ ನಡಿಗೆ ಬಿದ್ದು ತಾಯಿ ಆತ್ಮಹತ್ಯೆ

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ ನ ಮುಂದೆ ಜಿಗಿದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ.

ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45.000 ರೂ.ಲಭಿಸುವುದಾಗಿ ಹೇಳಿ ಯಾರೋ ದಾರಿ ತಪ್ಪಿಸಿದ್ದರಿಂದ ಮಹಿಳೆ ಈ ರೀತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಮಹಿಳೆ ಈ ರೀತಿ ಬಸ್ಸಿನಡಿ ಸಿಲುಕಿ ತನ್ನ ಜೀವನವನ್ನು ಕೊನೆಗೊಳಿಸಿದ್ದಾರೆ.

ವೀಡಿಯೊವನ್ನು ಟ್ವೀಟ್ ಮಾಡಿದ ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಜೀವನ ಸಾಗಿಸಲು ಪ್ರಯತ್ನಿಸುವವರು ಎದುರಿಸುತ್ತಿರುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ. ನಿಜವಾದ ಅಭಿವೃದ್ಧಿ ಎಂದರೆ ಯಾರೂ ಅಂತಹ ಹೆಜ್ಜೆ ಇಡಬಾರದು ಎಂದು ಟ್ವೀಟ್ ಮಾಡಲಾಗಿದೆ.

ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು ಈ ವೇಳೆ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿ ಈ ನಿರ್ಧಾರಕ್ಕೆ ಬಂದಿರುವುದು ತಿಳಿದುಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!