ಮೈಸೂರು ಸಮಗ್ರ ಅಭಿವೃದ್ಧಿಗಾಗಿ ಮೇಯರ್‌ ಸ್ಥಾನ ಬಿಜೆಪಿಗೆ ಕೊಡಿ: ಸಂಸದ ಪ್ರತಾಪಸಿಂಹ

ಮೈಸೂರು: ಈ ಬಾರಿ ಬಿಜೆಪಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಬೇಕೇ ಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಮೇಯರ್ ಸ್ಥಾನ ನಮಗೆ ಕೊಡಿ ಎಂದು ಸಂಸದ ಪ್ರತಾಪಸಿಂಹ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಾಲಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ. 22 ಸ್ಥಾನ ‌ಇರುವ ನಮಗೆ ಯಾರು ಬೇಕಾದರೂ ಸಹಕಾರ ನೀಡಬಹುದು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಮೈಸೂರು ಪಾಲಿಕೆಯಲ್ಲೂ ಬಿಜೆಪಿ ಪಕ್ಷವೇ ಅಧಿಕಾರದಲ್ಲಿ ಇದ್ದರೆ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟರು.

ನಮಗೆ ಒಮ್ಮೆಯೂ ಮೈಸೂರು ಪಾಲಿಕೆ ಮೇಯರ್ ಸ್ಥಾನ ಸಿಕ್ಕಿಲ್ಲ. ಹಿಂದೆ ಜಾ.ದಳ ಜೊತೆ ಹೊಂದಾಣಿಕೆ ಆಗಿದ್ದಾಗ ನಾಲ್ಕು ಬಾರಿ ಉಪಮೇಯರ್ ಮಾತ್ರ ಆಗಿದ್ದೇವೆ. ಈ ಬಾರಿ ಯಾರ ಜೊತೆ ಹೊಂದಾಣಿಕೆ ಆದರೂ ಮೇಯರ್ ಸ್ಥಾನ ನಮಗೇ ಬೇಕು. ನಿಮಗೆಲ್ಲ ಸಾಕಷ್ಟು ಅವಕಾಶ ಕೊಟ್ಟಾಗಿದೆ. ನಮಗೂ ಒಮ್ಮೆ ಪಾಲಿಕೆಯಲ್ಲಿ ಮೇಯರ್ ಸ್ಥಾನ ನೀಡಿ ಅವಕಾಶ ಕೊಡಿ ಎಂದರು.

× Chat with us