ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ತಡರಾತ್ರಿ(ಸೋಮವಾರ, ಏ.೨೨) ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಲಿನಲ್ಲಿ ಗಾಯವಾಗಿದ್ದ ಹಿನ್ನಲೆಯಲ್ಲಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಕುಟುಂಬ ಅವರನ್ನು ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೇ ಮಾರ್ಚ್ ನಲ್ಲಿ ತಾವು ರಾಜಕೀಯಕ್ಕೆ ಬಂದು 50 ವರ್ಷಗಳು ಪೂರೈಸಿದ ದಿನದಂದೇ ತಾವು ಸಕ್ರಿಯ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದರು. ಅದರಂತೆ ಏಪ್ರಿಲ್ ತಿಂಗಳಲ್ಲಿ ಮೈಸೂರಿಗೆ ಪ್ರಧಾನಿ ಮೋದಿ ಭೆಟಿಯಾದಾಗಲು ಅವರನ್ನು ಭೇಟಿಯಾಗಲು ಪ್ರಸಾದ್ ನಿರಾಕರಿಸಿದ್ದರು. ತಮಗೆ ಆರೋಗ್ಯದಲ್ಲಿ ವಿಪರೀತ ಏರುಪೇರಾಗಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಅವರಿಗೆ ನೇರವಾಗಿ ಹೇಳಿದ್ದರು.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ವಯಕ್ತಿಕವಾಗಿ ಭೇಟಿ ಆರೋಗ್ಯ ವಿಚಾರಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಐಸಿಯುನ ವೆಂಟಿಲೇಟ್‌ರನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…