Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಸಂಸದ ಶ್ರೀನಿವಾಸ ಪ್ರಸಾದ್‌ ನಿಧನ : ಪ್ರಧಾನಿ ಮೋದಿ ಸಂತಾಪ !

ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, ‘ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.

ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.

ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ. ಎಂದು ಬರೆಯುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:
error: Content is protected !!