BREAKING NEWS

ಮಿಸ್ಟರ್ ನರೇಂದ್ರ ಮೋದಿ ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ: ಸಿಎಂ ವಾಗ್ದಾಳಿ

ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ ಎಂದಿದ್ದಾರೆ.

#AnswerMadiModi ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ,  ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಕೇಳಿದ್ದಾರೆ.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ.  ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ನರೇಂದ್ರ ಮೋದಿ ಅವರು ಜಾಣಕಿವುಡಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ ಎಂದು ಟೀಕಿಸಿದ್ದಾರೆ.

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ‘ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ.  ರಾಹುಲ್ ಗಾಂಧಿ ಅವರ  ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ  ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ನರೇಂದ್ರ ಮೋದಿ ಅವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

2 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago