ಮೈಸೂರಿನಲ್ಲಿ ಪರೀಕ್ಷೆ ಮುಗಿಸಿ ವಾಪಸ್ಸಾಗುತ್ತಿದ್ದ ಎಂಎಸ್ಸಿ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು!

ಹಾಸನ: ಮೈಸೂರಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಪೂಜಾ (21) ಮೃತಪಟ್ಟ ವಿದ್ಯಾರ್ಥಿನಿ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ರಾಚೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಮೈಸೂರಿನಲ್ಲಿ ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿ ಭಾನುವಾರ ಪರೀಕ್ಷೆಗೆಂದು ನಗರಕ್ಕೆ ಬಂದಿದ್ದರು. ಪರೀಕ್ಷೆ ಮುಗಿಸಿ ತಂದೆಯೊಂದಿಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಂದೆ-ಮಗಳು ಗಂಭೀರ ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

× Chat with us