BREAKING NEWS

ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಠಾಕ್ರೆ ಆಪ್ತರ ನಿವಾಸದ ಮೇಲೆ ಇ.ಡಿ ದಾಳಿ

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.

ನಗರದ 15 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ. ಆದಿತ್ಯ ಠಾಕ್ರೆ ಅವರ ಸಹವರ್ತಿ ಸೂರಜ್ ಚವಾಣ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯಸಭಾ ಸಂಸದ ಮತ್ತು ಯುಬಿಟಿ ಸೇನಾ ವಕ್ತಾರ ಸಂಜಯ್ ರಾವುತ್ ಅವರ ನಿಕಟವರ್ತಿ ಸುಜಿತ್ ಪಾಟ್ಕರ್ ಸೇರಿದಂತೆ ಐಎಎಸ್ ಸಂಜೀವ್ ಜೈಸ್ವಾಲ್ ಮತ್ತು ಇತರ 14 ಮಂದಿಯ ಸ್ಥಳಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

ಇದಕ್ಕೂ ಮುನ್ನ ಇ.ಡಿ ಸುಜಿತ್ ಪಾಟ್ಕರ್, ಸಂಸದ ಸಂಜಯ್ ರಾವತ್ ಸೇರಿದಂತೆ ಮತ್ತಿತರ ಮೇಲೆ ಅಕ್ರಮ ಹಣ ಪ್ರಕರಣವನ್ನು ದಾಖಲಿಸಿತ್ತು. ಆರೋಗ್ಯ ಕ್ಷೇತ್ರದಲ್ಲಿ ಅನುಭವವಿಲ್ಲದಿದ್ದರೂ ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಮುಂಬೈ ಕೋವಿಡ್‌ ಫೀಲ್ಡ್‌ ಆಸ್ಪತ್ರೆಯ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಏನಿದು ದೂರು?

ಬಿಜೆಪಿ ನಾಯಕ ಕಿರಿತ್ ಸೋಮಜ್ಯ ಅವರು ಲೈಫ್‌ಲೈನ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸರ್ವಿಸ್ ಹಾಗೂ ಸಜಿತ್ ಪಾಟ್ಕರ್ ಹಾಗೂ ಅವರ ಸಹಚರರ ವಿರುದ್ಧ ನಕಲಿ ಸಹಿ ಪ್ರಕರಣವನ್ನು ದಾಖಲಿಸಿದ್ದರು. ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಇವರು ಆರೋಗ್ಯ ಕ್ಷೇತ್ರದ ಬಗ್ಗೆ ಅನುಭವ ಇಲ್ಲದಿದ್ದರೂ ಕೋವಿಡ್ ಆಸ್ಪತ್ರೆಗಳನ್ನು ನಿರ್ವಹಿಸುವುದಾಗಿ ಬಿಎಂಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ತನಿಖೆಗೆ ವರ್ಗಾಯಿಸಿದ್ದರು. ಜೊತೆಗೆ ಅಕ್ರಮ ಹಣ ವರ್ಗಾವಣೆ ಕೇಸನ್ನು ದಾಖಲಿಸಿತ್ತು. ಪಾಟ್ಕರ್ ಅವರ ಮನೆಯಲ್ಲಿ ಇಡಿ ನಡೆಸಿದ ದಾಳಿಯ ಸಮಯದಲ್ಲಿ, ಕೋವಿಡ್ ಕ್ಷೇತ್ರ ಆಸ್ಪತ್ರೆಗಳ ನಿರ್ವಹಣೆಗಾಗಿ ಪಾಟ್ಕರ್ ಬಿಎಂಸಿಯೊಂದಿಗೆ ಸಹಿ ಮಾಡಿದ ಒಪ್ಪಂದದ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಇದಕ್ಕಾಗಿ ಪಾಟ್ಕರ್ 38 ಕೋಟಿ ರೂಗಳನ್ನು ನೀಡಿದ್ದರು.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

12 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago