ಮುಂಬೈ (ಪಿಟಿಐ); ಶಿವಸೇನಾ (ಠಾಕ್ರೆ ಬಣ ) ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮಿತ್ರಪಕ್ಷಗಳು ಭಿನ್ನಾಭಿಪ್ರಾಯ ಹೊಂದಿದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಮಿತ್ರಪಕ್ಷಗಳ ನಡುವಿನ ಒಗ್ಗಟ್ಟಿನ ವಿಷಯವನ್ನು ಚರ್ಚಿಸಲಾಗಿದೆ ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದರು.
ಮೈತ್ರಿಕೂಟದ ಏಕತೆಗಾಗಿ ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಇದಕ್ಕೆ ನಾವು ಒಪ್ಪಿಕೊಂಡಿದ್ದೇವೆ ಎಂದರು.
ಅದಾನಿ ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಬದಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸಮಿತಿಯಿಂದ ತನಿಖೆಗೆ ಎನ್‌ಸಿಪಿ ಮುಖ್ಯಸ್ಥರು ಒಲವು ತೋರಿದ ಕೆಲ ದಿನಗಳ ನಂತರ ಪವಾರ್ ಮತ್ತು ಠಾಕ್ರೆ ನಡುವಿನ ಸಭೆ ನಡೆದಿದೆ.
ಜೆಪಿಸಿ ತನಿಖೆಗೆ ಕಾಂಗ್ರೆಸ್, ಶಿವಸೇನಾ ಒತ್ತಾಯಿಸುತ್ತಿವೆ. ವಿರೋಧ ಪಕ್ಷಗಳ ಈ ಬೇಡಿಕೆಗೆ ಎನ್‌ಸಿಪಿಯ ಸಮ್ಮತಿ ಇಲ್ಲದಿದ್ದರೂ ವಿಪಕ್ಷಗಳ ಒಗ್ಗಟ್ಟಿನ ಹಿತದೃಷ್ಟಿಯಿಂದ ಅವರ ನಿಲುವಿನ ವಿರುದ್ಧ ಹೋಗುವುದಿಲ್ಲ ಎಂದು ಶರದ್ ಪವಾರ್ ತಿಳಿಸಿದ್ದರು.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…