BREAKING NEWS

ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ : ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ

ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್​ ಬಾಬು ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.

ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ : ಹೌದು ಕೊಲೆಯಾದ ಬಾಬು ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತಿದ್ದ. ಜೊತೆಗೆ ಕೆಲ ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ. ಮೃತ ರೌಡಿ ಶೀಟರ್ ಅರಸಯ್ಯನ ಗ್ಯಾಂಗ್​ನಲ್ಲಿ ಬಾಬು ಗುರುತಿಸಿಕೊಂಡಿದ್ದ. ಇನ್ನು ಇತನನ್ನ ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

lokesh

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago