Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ : ಆರೋಪಿಗಳ ಬಂಧನ

ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು ಮತ್ತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.

ಆರೋಪಿಗಳ ಪತ್ತೆಗೆ ರಚಿಸಿದ್ದ ಎರಡು ತಂಡ ಈ ಕಾರ್ಯಾಚರಣೆ ನಡೆಸಿದೆ. ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್ ಈಗ ಪೊಲೀಸರ ವಶದಲ್ಲಿದ್ದಾರೆ‌. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!