Mysore
23
clear sky

Social Media

ಬುಧವಾರ, 21 ಜನವರಿ 2026
Light
Dark

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದ ಆರೋಪಿ ಇಷ್ಟು ದಿನ ಸಿಐಡಿ ಕಸ್ಟಡಿಗೆ?

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಯನ್ನು ಸಿಐಡಿ ಕಸ್ಟಡಿಗೆ ವಹಿಸಿ ನ್ಯಾಯಮೂರ್ತಿ ನಾಗೇಶ್‌ ನಾಯ್ಕ್‌ ಅವರು ಆದೇಶ ಹೊರಡಿಸಿದ್ದಾರೆ.

ಅಂಜಲಿ ಹತ್ಯೆಯಾದ ಕೆಲವೇ ದಿನಗಳಲ್ಲಿ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಒಂದೇ ದಿನ ಒಂದನೇ ಜೆಎಂಎಫ್‌ಸಿ ಸಿವಿಲ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯತೆ ಇರುವ ಕಾರಣ ಮತ್ತೆ 15 ದಿನಗಳ ಕಾಲ ಕಸ್ಟಡಿಗೆ ಕೇಳಿ ಸಿಐಡಿ ನ್ಯಾಯಾಲಯದ ಮೆಟ್ಟಿಲೇರಿತ್ತು.

ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದ ವಿಶ್ವ, ಅವಳನ್ನು ಮೈಸೂರಿಗೆ ಕರೆದೆ ಆಕೆ ನನ್ನ ಬಳಿ ಹಣ ಪಡೆದು ಮೈಸೂರಿಗೆ ಬರಲು ನಿರಾಕರಿಸಿದರಳು. ಕರೆ ಮಾಡಿದರು ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಳು. ಹೀಗಾಗಿ ಕೋಪದಿಂದ ನಾನು ಆಕೆಯನ್ನು ಹತ್ಯೆ ಮಾಡಿದೆ ಎಂದು ಒಪ್ಪಿಕೊಂಡಿದ್ದ.

ಇನ್ನು ಹೆಚ್ಚಿನ ವಿಚಾರಣೆ ಅಗತ್ಯವಿದ್ದ ಕಾರಣ ಕೋರ್ಟ್‌ ಮುಂದೆ ಹಾಜರು ಪಡಿಸಿ 15 ದಿನಗಳ ಹೆಚ್ಚುವರಿ ಕಸ್ಟಡಿಗೆ ವಿಶ್ವನನ್ನು ನೀಡಬೇಕು ಎಂದು ಸಿಐಡಿ ಅಧಿಕಾರಿಗಳು ಕೋರಿದ್ದರು. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು 8 ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Tags:
error: Content is protected !!