Mysore
33
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಮುಸ್ಲಿಂ ಮೀಸಲಾತಿ| ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಸುಪ್ರೀಂಕೋರ್ಟ್ ಬೆತ್ತಲುಗೊಳಿಸಿದೆ: ಕಾಂಗ್ರೆಸ್‌

ಬೆಂಗಳೂರು: ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‍ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಬಿಜೆಪಿ ಸರ್ಕಾರದ ಭ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಅನುಷ್ಠಾನ ಅಸಾಧ್ಯ ಎಂದು ನ್ಯಾಯಾಲಯ ಹೇಳುವ ಮೂಲಕ ಜನರ ಕಿವಿ ಮೇಲೆ ಹೂವು ಇಡುವ ಬಿಜೆಪಿ ಪ್ರಯತ್ನವನ್ನು ಬಯಲುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮೀಸಲಾತಿ ಗಿಮಿಕ್ ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು? ಸಬೂಬುಗಳೇನು ಎಂದು ಪ್ರಶ್ನಿಸಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!