ಹಾಸನ : ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್ ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಹೇಳಿದ್ದಾರೆ.
ಇದು ಸಾಮಾನ್ಯ ಹಾಗೂ ಪ್ರಾಮಾಣಿಕ ವಕೀಲನಿಗೆ ಸಿಕ್ಕಿ ಜಯ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇದುವರೆಗೂ ಬಂದ ಆಮಿಷಗಳಿಗೆ ಒಳಗಾಗಲಿಲ್ಲ. ಬೆದರಿಕೆಗೂ ಹೆದರಲಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್ ರೇವಣ್ಣ ಅವರ ಅಪರಾಧಗಳ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೆ. ನ್ಯಾಯಾಲಯದ ಮೇಲೆ ಅಪಾರ ವಿಶ್ವಾಸ ಇತ್ತು. ಯಾರೇ ತಪ್ಪು ಮಾಡಿದ್ದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂದು ನಾನು ಅರ್ಜಿ ಸಲ್ಲಿಸಿದ್ದೆ. ಅಪರಾಧ ಸಾಬೀತಾದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿ ಕೋರ್ಟ್ ತೀರ್ಪು ನೀಡಿದೆ ಎಂದು ತಿಳಿಸಿದರು.
23 ಕೋಟಿ ಆಸ್ತಿ ವಿಚಾರ ಮುಚ್ಚಿಟ್ಟಿದ್ದರು. ಬ್ಯಾಂಕ್ ಬ್ಯಾಲೆನ್ಸ್ ವಿವರವನ್ನೂ ತಪ್ಪು ಕೊಟ್ಟಿದ್ದರು. ಆದಾಯ ತೆರಿಗೆ ಸರಿಯಾಗಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದರು. ಇದೆಲ್ಲವನ್ನು ನಾವು ಸಾಬೀತುಪಡಿಸಿದ್ದೇವೆ. ಅಷ್ಟೇ ಅಲ್ಲದೇ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಅವರ ತಂದೆ 200 ಕ್ಕೂ ಹೆಚ್ಚು ಕಳ್ಳ ವೋಟುಗಳನ್ನು ಹಾಕಿಸಿದ್ದರು. ಅವರು ಜನರಿಗೆ ಹಣ ಹಂಚುವ ದೃಶ್ಯವೂ ಸೆರೆಯಾಗಿತ್ತು. ಇದರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿತ್ತು. ಬಾವಿಕೆರೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ರಿಜಿಸ್ಟರ್ ಮಾಡಿಕೊಂಡಿದ್ದರು. ನಾವು ಮಾಡಿದ ಎಲ್ಲಾ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನಮ್ಮ ಹೋರಾಟಕ್ಕೆ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ಚುನಾವಣೆಯಲ್ಲಿ ನಿಲ್ಲಬೇಕಾದ ವ್ಯಕ್ತಿ ಸ್ವಚ್ಛವಾಗಿ ಇರಬೇಕು ಎಂಬ ಸಂದೇಶವನ್ನು ಕೋರ್ಟ್ ತನ್ನ ತೀರ್ಪಿನ ಮೂಲಕ ನೀಡಿದೆ ಎಂದರು.
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…