ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ ನಲ್ಲಿ ನಡೆದಿದೆ.
ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.
ಅದೃಷ್ಟವಶಾತ್ ಅಪಘಾತಕ್ಕೀಡಾದ ಕಾರಿನ ಮುಂದೆ-ಹಿಂದೆ ಯಾವುದೇ ವಾಹನ ಸಂಚರಿಸದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ದಶಪಥ ಹೆದ್ದಾರಿಯಿಂದ ಅಪಘಾತದ ಕಾರು ತೆರವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…