ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಸೋಮವಾರ 10 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡಿರುವ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡ ಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರ ಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು ಜುಲೈ 10, 2013ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ತಿಳಿಸಿದ್ದಾರೆ.
ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ – ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಹೇಳಿದ್ದಾರೆ.
ಇನ್ನು ಸಿಎಂ ಆಫ್ ಕರ್ನಾಟಕದ ಟ್ವೀಟ್ ಖಾತೆಯಿಂದಲೂ ಟ್ವೀಟ್ ಮಾಡಿದ್ದು, ಹಸಿವಿನ ಬೇನೆ ನಾಡಿನ ಬಡ ಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಸೋಮವಾರದಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ ಜಿ ಅಕ್ಕಿ ಹಾಗೂ 170 ರೂ. ನೀಡಲಿದ್ದೇವೆ.
ಹೆಚ್ಚುವರಿ 5 ಕೆ ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಸೋಮವಾರ ಚಾಲನೆ ಸಿಗಲಿದೆ. 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಹಸಿವು ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಈ ಯೋಜನೆಗೆ ಸಿದ್ದರಾಮಯ್ಯ ಸಂಜೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯ ಪ್ರಕಾರ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಅಥವಾ ಆಹಾರ ಧಾನ್ಯ ಉಚಿತವಾಗಿ ಸಿಗಲಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…