ಮೈಸೂರು| ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್‌ ಮಾಡುತ್ತಿದ್ದವರ ಬಂಧನ

ಮೈಸೂರು: ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ.

ನವೀನ್‌, ಶಿವರಾಜು, ಹರೀಶ್‌, ಅನಿತಾ, ವಿಜಿ ಬಂಧಿತ ಆರೋಪಿಗಳು.

ಇವರು ಮೈಸೂರು ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲಿಯೂ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ಇವರ ಮೋಸದ ಜಾಲಕ್ಕೆ ಸಿಲುಕಿ ಕಿರುಕುಳ ತಾಳಲಾರದ ವ್ಯಕ್ತಿಯೊಬ್ಬರು ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ವ್ಯಕ್ತಿಯಿಂದ ಆರೋಪಿಗಳು 31 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ.

ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಕುವೆಂಪು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ರಾಜು, ರಾಜಶೇಖರ್, ಮಹಾವೀರ, ಮಹದೇವ್ ಸೇರಿದಂತೆ ಹಲವರು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದೀಗ ಹೈಪ್ರೊಪೈಲ್ ವ್ಯಕ್ತಿಗಳೂ ಸೇರಿದಂತೆ ಹಲವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸರು ಇನ್ನೂ ಕೆಲವರಿಗಾಗಿ ಬಲೆ ಬೀಸಿದ್ದಾರೆ.

× Chat with us