ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ದಿನಾಂಕ ಫಿಕ್ಸ್‌

ಮೈಸೂರು: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ಇದೇ ಆ.25ರಂದು ನಡೆಯಲಿದೆ.

ಅಂದು ಮಧ್ಯಾಹ್ನ 12 ಗಂಟೆಗೆ ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

MCC

ಮಹಾಪೌರರ ಚುನಾವಣೆಗೆ ದಿನಾಂಕ ಹೊರ ಬೀಳುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ವಲಯದಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಪ್ರಾರಂಭವಾಗಿ ಮಾತುಕತೆಗೆ ದಾರಿ ಮಾಡಿಕೊಟ್ಟಿದೆ.

ಮಹಾಪೌರ ಸ್ಥಾನವು ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಾಗಿದ್ದು, ಜೆಡಿಎಸ್‌ನಿಂದ ನಾಲ್ವರು ಸದಸ್ಯರಲ್ಲಿ ಪೈಪೋಟಿ ಉಂಟಾಗಲಿದೆ.

× Chat with us