ಕಾಂಗ್ರೆಸ್ ನಿಯೋಗದಿಂದ ಜಿಲ್ಲಾಧಿಕಾರಿಗಳ ಭೇಟಿ: ಪ್ರತಾಪಸಿಂಹ ವಿರುದ್ಧ ದೂರು

ಮೈಸೂರು: ದೇವಸ್ಥಾನಗಳ ತೆರವು ವಿಚಾರದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಹೇಳಿಕೆ ನೀಡುತ್ತಿರುವ ಸಂಸದ ಪ್ರತಾಪಸಿಂಹ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್‌ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಯಿತು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ದೂರು ನೀಡಿದರು. ಈ ವೇಳೆ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್,ಕಳಲೆ ಕೇಶವಮೂರ್ತಿ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರರಾದ .ಲಕ್ಷ್ಮಣ್,ಎಚ್.ಎ.ವೆಂಕಟೇಶ್, ಮಂಜುಳ‌ ಮಾನಸ,ಪ್ರಧಾನ ಕಾರ್ಯದರ್ಶಿಗಳಾದ ಎಂ.ಶಿವಣ್ಣ,ಈಶ್ವರ್ ಚಕ್ಕಡಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷ ಸೋಮಶೇಖರ್ ಇತರರು ಹಾಜರಿದ್ದರು.

× Chat with us