ಈ ಬಾರಿಯೂ ಸರಳ ದಸರಾ, ಅ.15ರಂದು ಜಂಬೂಸವಾರಿ: ಸಚಿವ ಎಸ್‌.ಟಿ.ಸೋಮಶೇಖರ್‌

ಮೈಸೂರು: ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್‌ 7ರಂದು ದಸರಾ ಉದ್ಘಾಟನೆ ಆಗಲಿದೆ. ಅ.15ರಂದು ಮಧ್ಯಾಹ್ನ ಜಂಬೂಸವಾರಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಬೇಕೆಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ. ಅರಮನೆ ಒಳಗಡೆ ಮಾತ್ರ ಜಂಬೂಸವಾರಿ ನಡೆಯಲಿದೆ ಎಂದು ಹೇಳಿದರು.

ಎಸ್‌.ಟಿ.ಸೋಮಶೇಖರ್‌ ಹೇಳಿದ್ದೇನು, ಇದನ್ನೂ ಓದಿ.

× Chat with us