ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬಕ್ಕೆ ಕೋವಿಡ್‌ ದೃಢ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ. ರೋಹಿಣಿ ಸಿಂಧೂರಿ ಅವರ ಪರೀಕ್ಷೆ ವರದಿ ನೆಗೆಟಿವ್‌ ಬಂದಿದ್ದು, ಮುಂಜಾಗ್ರತೆ ಕ್ರಮಗಳನ್ನು ವಹಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ತಂದೆ-ತಾಯಿ, ಅತ್ತೆ-ಮಾಮ ಹಾಗೂ ಪತಿ ಎಲ್ಲರಿಗೂ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಜಿಲ್ಲಾಧಿಕಾರಿಯೂ ಕೋವಿಡ್‌ ಪರೀಕ್ಷೆ ಮಾಡಿಸಿದ್ದು, ಅವರ ವರದಿ ನೆಗೆಟಿವ್‌ ಎಂದು ಬಂದಿದೆ.

× Chat with us