ಕೋವಿಡ್‌ ಮಿತ್ರ ಕೇಂದ್ರಗಳನ್ನು ಪರಿಶೀಲಿಸಿದ ಮೈಸೂರು ಡಿಸಿ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ತೆರೆಯಲಾಗಿರುವ ʻಕೋವಿಡ್‌ ಮಿತ್ರʼ ಕೇಂದ್ರಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲಿಸಿದರು.

ನಗರದಲ್ಲಿ 3 ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ 150 ಕೋವಿಡ್‌ ಮಿತ್ರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಹಂಚ್ಯಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಿದ್ದಾರ್ಥನಗರ ಹಾಗೂ ಚಾಮುಂಡಿಪುರಂನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತೆರೆದಿರುವ ಕೋವಿಡ್‍ಮಿತ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಹಂಚ್ಯಾ ಗ್ರಾಮದ ಕೋವಿಡ್‌ ಮಿತ್ರ ಕೇಂದ್ರದಲ್ಲಿ ಸೋಂಕಿತರಿಗೆ ಜಿಲ್ಲಾಧಿಕಾರಿ ಅವರು ಮೆಡಿಸಿನ್ ಕಿಟ್‍ಗಳನ್ನು ವಿತರಿಸಿದರು‌.
ಈ ಸಂದರ್ಭದಲ್ಲಿ ಮೈಸೂರು ತಾಲ್ಲೂಕು ತಹಸಿಲ್ದಾರ್ ರಕ್ಷಿತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಎಂ.ಎಸ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಮಹದೇವಪ್ರಸಾದ್, ಡಾ.ರವೀಂದ್ರ, ಡಾ. ಟಿ.ಆರ್.ನವೀನ್ ಮತ್ತಿತರು ಉಪಸ್ಥಿತರಿದ್ದರು.

× Chat with us